ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ತುಮಕೂರು: ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು, ದಾವಣಗೆರೆ PSI ನೇಣಿಗೆ ಶರಣು

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು.

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದ ನಾಗರಾಜಪ್ಪ, ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಲಾಡ್ಜ್‌ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ತದನಂತರ ಸುದ್ದಿ ತಿಳಿದು ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ರೂಮ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. 2 ಪುಟಗಳ ಡೆತ್ ನೋಟ್ ನಲ್ಲಿ `ನನ್ನ ಸಾವಿಗೆ ನಾನೇ ಕಾರಣ’. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್‍ನೋಟ್‍ನಲ್ಲಿ ಕ್ಷಮೆ ಕೇಳಿದ್ದಾರೆ.

kiniudupi@rediffmail.com

No Comments

Leave A Comment