.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಹೆಚ್ಚುವರಿ
ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment