ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಜುಲೈ 13ರಂದು ಉಡುಪಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ

ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಇದಾಗಿದ್ದು ಸರ್ವಜ್ಞ ಪೀಠಾರೋಹಣದ ಹಾಗೂ ಶ್ರೀಕೃಷ್ಣನ ಪೂಜಾ ದೀಕ್ಷೆ ಸ್ವೀಕರಿಸುವ ಪೂರ್ವಭಾವಿ ಆಚರಣೆಗಳಲ್ಲಿ ಕಟ್ಟಿಗೆ ಮುಹೂರ್ತ ಪ್ರಮುಖವಾಗಿದೆ.

ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ನೆರವೇರಿಸಿರುವ ಭಾವಿ ಪರ್ಯಾಯ ಶಿರೂರು ಮಠದ ಕಟ್ಟಿಗೆ ಮುಹೂರ್ತವು ಇದೇ ಜುಲೈ 13ರಂದು ನೆರವೇರಲಿದೆ.

ಉಡುಪಿ ಶೀರೂರು ಮಠದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಠದ ದಿವಾನರಾದ ಉದಯ ಸರಳತ್ತಾಯರವರು ಈ ಬಾರಿಯ ಕಟ್ಟಿಗೆ ಮುಹೂರ್ತವು ಜುಲೈ 13ರಂದು ಬೆಳಿಗ್ಗೆ 9.15 ರ ಸಿಂಹ ಲಗ್ನದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಮಠದ ಪುರೋಹಿತರು ನಿಗದಿಪಡಿಸಿದ ದಿನದಂದು ಕಟ್ಟಿಗೆ ಪೇರಿಸಿಡುವ ಜಾಗದಲ್ಲಿ ನಡುಗಂಬವನ್ನು ನೆಟ್ಟು ಅದರ ಸಮ್ಮುಖದಲ್ಲಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ. ಬೆಳಿಗ್ಗೆ 7.30ಕ್ಕೆ ಶಿರೂರು ಮಠದಲ್ಲಿ ನವಗ್ರಹ ಇತ್ಯಾದಿ ಪ್ರಾರ್ಥನೆಯೊಂದಿಗೆ ವೇದಘೋಷ, ಕೊಂಬು, ಕಹಳೆ, ವಾದ್ಯ ಬಿರುದಾವಳಿಯ ಜೊತೆಯಲ್ಲಿ ಮಠದ ಪರಿಚಾರಕರು, ಭಕ್ತಾದಿಗಳು ಕಲ್ಸಂಕದ ಲಕ್ಷ್ಮೀ ತೋಟದಿಂದ ಕಟ್ಟಿಗೆಯನ್ನು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿಬರಲಿದ್ದಾರೆ.

ವಿವಿಧ ಗಣ್ಯರು, ವಿದ್ವಾಂಸರು, ದಿವಾನರು, ಮತ್ತು ಭಕ್ತರ ಸಹಿತವಾಗಿ ಚಂದ್ರಮೌಳೀಶ್ವರ, ಶ್ರೀಆನಂತೇಶ್ವರ, ಶ್ರೀಕೃಷ್ಣ ಮುಖ್ಯಪ್ರಾಣ ಮಧ್ಯಗುರುಗಳ ಹಾಗೂ ಗರುಡನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ನಿಗದಿಪಡಿಸಿದ ಸ್ಥಳದಲ್ಲಿ ಪೂಜಾದಿಗಳನ್ನು ಸಲ್ಲಿಸಿ ಪ್ರಾರ್ಥನೆಗೈದು ಕಟ್ಟಿಗೆ ರಥ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗುತ್ತದೆ. ಈ ಕಟ್ಟಿಗೆ ರಥ ನಿರ್ಮಾಣ ಕಾರ್ಯವು ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ನೆರವೇರಲಿದೆ ಎಂದರು.

ಕರ್ಮಾರು ಮರದ ಸುಮಾರು 25 ಲಾರಿಯಷ್ಟು ಕಟ್ಟಿಗೆಯನ್ನು ಸಂಗ್ರಹಿಸಿ ಅದನ್ನು ಮಧ್ವ ಸರೋವರದ ಈಶಾನ್ಯ ಮೂಲೆಯಲ್ಲಿ ಸುಮಾರು 50 ಅಡಿ ಎತ್ತರ 25 ಅಡಿ ಅಗಲದ ಕಲಾತ್ಮಕವಾದ ರಥದ ಮಾದರಿಯಲ್ಲಿ ಕಟ್ಟಿಗೆಯನ್ನು ಪೇರಿಸಿಡಲಾಗುತ್ತದೆ. ತುದಿಯಲ್ಲಿ ಶಿಖರ, ಪತಾಕೆಯನ್ನಿರಿಸಿ ಸಿಂಗರಿಸಲಾಗುತ್ತದೆ ಎಂದು‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ,ಮೋಹನ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment