ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬೆಳ್ತಂಗಡಿ: ತಾಯಿ ಮನೆಯಲ್ಲಿ ಶಾಲಾ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳ್ತಂಗಡಿ:ಜು. 13 : ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ರಮ್ಯಾ ಎರಡು ವರ್ಷಗಳ ಹಿಂದೆ ಕೊಯ್ಯೂರಿನ ಪದಡ್ಕ ನಿವಾಸಿ ಲತೀಶ್ ಅವರನ್ನು ವಿವಾಹವಾಗಿದ್ದರು. ಅವರು ಬೆಳ್ತಂಗಡಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ರಮ್ಯಾ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ತಮ್ಮ ತಾಯಿಯ ಮನೆಗೆ ಬಂದಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ. . ಅವರ ಆರೋಗ್ಯ ಸ್ಥಿತಿಯ ಬಗ್ಗೆ ಚಿಂತೆಗೀಡಾಗಿ ಅವರು ಈ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.
ಕಂದಾಯ ನಿರೀಕ್ಷಕ ಪ್ರತೀಶ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.