ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನ ಉದ್ಘಾಟನೆ

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರ ರಮೇಶ್ ಕಾಂಚನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ರೆಡ್‌ಕ್ರಾಸ್ ಕಾರ್ಯದರ್ಶಿ ಗಣನಾಥ ಎಕ್ಕಾರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು

No Comments

Leave A Comment