ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ

ಉತ್ತರಾಖಂಡ: ಪಿಥೋರಗಢ್‌ನಲ್ಲಿ ಕಮರಿಗೆ ಉರುಳಿದ ಜೀಪ್; 8 ಮಂದಿ ಸಾವು

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ.

ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮುವಾನಿ ಪ್ರದೇಶದ ಭಂಡಾರಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಅಪಘಾತದಲ್ಲಿ ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೇಖಾ ಯಾದವ್ ದೃಢಪಡಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment