ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನಾಸಿಕ್: ಕಾರು, ಬೈಕ್ ನಡುವೆ ಭೀಕರ ಅಪಘಾತ, ಮಗು ಸೇರಿ 7 ಮಂದಿ ಸಾವು, ಇಬ್ಬರಿಗೆ ಗಾಯ

ನಾಸಿಕ್, ಜುಲೈ 17: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ(Accident) ಸಂಭವಿಸಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ. ಜಿಲ್ಲೆಯ ದಿಂಡೋರಿ ನಗರದ ಬಳಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ವಾನಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ನಡೆದಿರುವ ಘಟನೆಯ ಬಗ್ಗೆ ಪೊಲೀಸರಿಗೆ ರಾತ್ರಿ 11.57 ಕ್ಕೆ ಮಾಹಿತಿ ಬಂದಿತ್ತು.

ಪೊಲೀಸರು ಸ್ಥಳಕ್ಕೆ ತಲುಪಿದಾಗ, ಎರಡೂ ವಾಹನಗಳು ರಸ್ತೆಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಬಂದ ತಕ್ಷಣ, ಪೊಲೀಸರು ಮತ್ತು ಇತರ ಸಂಸ್ಥೆಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದರು.

ಬುಧವಾರ ಮಧ್ಯಾಹ್ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮೋಟಾರ್ ಸೈಕಲ್ ಸವಾರಿ ಮಾಡುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಮೀರತ್‌ನಿಂದ ದೆಹಲಿಗೆ ಹೋಗುತ್ತಿದ್ದ ಮೋಟಾರ್ ಸೈಕಲ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಸೆಕ್ಟರ್ 58 ಪೊಲೀಸ್ ಠಾಣೆಗೆ ಮಂಗಳವಾರ ಮಧ್ಯಾಹ್ನ ಮಾಹಿತಿ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್​​ನಲ್ಲಿ ಮೂವರಿದ್ದರು. ಅಪಘಾತದಲ್ಲಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಅವರು ದೆಹಲಿ ನಿವಾಸಿಗಳಾಗಿದ್ದು ಜೀವನ್ ಜ್ಯೋತಿ ಜೆನಾ (24), ಸುಮಿತ್ ಕುಮಾರ್ (23) ಮತ್ತು ಆದಿತ್ಯ ರಾಜ್ (23) ಎಂದು ಗುರುತಿಸಲಾಗಿದೆ. ಮೂವರೂ ಕನ್ವಾರಿಯಾಗಳಂತೆ ಬಟ್ಟೆ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಅವರು ಕನ್ವಾರಿಯಾಗಳಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು. ಇಲ್ಲಿ ಕಾರಿನೊಂದಿಗೆ ಸಾಹಸ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬ ಭಾರೀ ಬೆಲೆ ತೆರಬೇಕಾಯಿತು. ಸಾಹಸ ಪ್ರದರ್ಶನದ ಸಮಯದಲ್ಲಿ, ಆ ವ್ಯಕ್ತಿ ಕಾರಿನ ನಿಯಂತ್ರಣ ಕಳೆದುಕೊಂಡು ಯುವಕ ಕಾರಿನೊಂದಿಗೆ 300 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಮಾಹಿತಿಯ ಪ್ರಕಾರ, ಯುವಕ ಪಠಾಣ್ ತಾಲೂಕಿನ ಬಳಿ ಜಲಪಾತವನ್ನು ನೋಡಲು ಹೋಗಿದ್ದ. ಪ್ರಸ್ತುತ, ಘಟನೆಯ ನಂತರ ಯುವಕನನ್ನು ರಕ್ಷಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿತ್ತು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ಘಟನೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

No Comments

Leave A Comment