ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಯಾರೋ ಹೇಳಿದರು ಅಂತ SIT ರಚನೆ ಸಾಧ್ಯವಿಲ್ಲ: Dharmasthala Case ವಿಷಯವಾಗಿ ಸಿಎಂ ಪ್ರತಿಕ್ರಿಯೆ
ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯಕ್ಕೆ ಎಸ್‌ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದರೂ ನಾವು ಕೇರ್ ಮಾಡೋದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.
ಪೊಲೀಸ್ ಠಾಣೆಗೆ ದೂರು
ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟುದ್ದು ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.