ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ಬಂಟ್ವಾಳ: ವಿಟ್ಲ ಸಮೀಪ ಮಿನಿ ಟಿಪ್ಪರ್-ಕಾರು ಡಿಕ್ಕಿ; ಓರ್ವ ಸಾವು, ಇಬ್ಬರಿಗೆ ಗಾಯ
ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ.
ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿಟ್ಲದಿಂದ ಕಲ್ಲಡ್ಕ ಕಡೆಗೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡ ಅನೀಶ್ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.
ಅನೀಶ್ ಅವರು ಅನಂತಾಡಿ ಆಶ್ವತ್ತಡಿ ಮೂಲದವರು. ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದು, ಕುಟುಂಬದ ಸದಸ್ಯರನ್ನು ವಿಟ್ಲಕ್ಕೆ ಬಿಟ್ಟು ಬರಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.