Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪತನ: 48 ಪ್ರಯಾಣಿಕರು ಸಾವು

ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿರುವುದಾಗಿ ತಿಳಿದುಬಂದಿದೆ.

ಪ್ರಯಾಣಿಕ ವಿಮಾನದಲ್ಲಿ (ಪ್ಯಾಸೆಂಜರ್ ಫ್ಲೈಟ್) 6 ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿ 49 ಮಂದಿ ಇದ್ದರು ಅಂತ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ತಿಳಸಿದ್ದಾರೆ.

ವಿಮಾನದಲ್ಲಿದ್ದ ಎಲ್ಲಾ 50 ಮಂದಿ ಸಾವನ್ನಪ್ಪಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆ ತಿಳಿಸಿದೆ. ಆದರೆ ಅಧಿಕೃತವಾಗಿ ಸಾವನ್ನಪ್ಪಿರುವುದು ಬಹಿರಂಗವಾಗಿಲ್ಲ. ಈ ನಡುವೆ ಹೆಲಿಕಾಪ್ಟರ್‌ನ ಅವಶೇಷಗಳನ್ನು ರಕ್ಷಣಾ ಹೆಲಿಕಾಪ್ಟರ್‌ಗಳು ಪತ್ತೆಹಚ್ಚಿರುವುದಾಗಿ ರಷ್ಯಾದ ತುರ್ತು ಸಚಿವಾಲಯ ಹೇಳಿದೆ.

No Comments

Leave A Comment