ಹೊಸ ಐದು ಐರಾವತ ಕ್ಲಬ್ ಕ್ಲಾಸ್ 2.0 ಬಸ್ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದ್ದಾರೆ.
ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ರೂ ಪರಿಹಾರ ಮತ್ತು ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ 2.60 ಕೋಟಿ ರೂ ಪರಿಹಾರ ವಿತರಣೆ ಮಾಡಿದರು.
ಕೆಎಸ್ಆರ್ಟಿಸಿಗೆ 05 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ಗಳು ಬೆಂಗಳೂರು ಟು ತಿರುಪತಿಗೆ ಒಂದು ಬಸ್, ಮಂಗಳೂರು ಟು ಬೆಂಗಳೂರು ಎರಡು ಮತ್ತು ಮೈಸೂರು ಟು ಮಂತ್ರಾಲಯಕ್ಕೆ ಎರಡು ಬಸ್ಗಳು ಸಂಚಾರ ನಡೆಸಲಿವೆ.
ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆಗಳು
-
51 ಆಸನಗಳು 2×2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.
-
ಇದು ಶಕ್ತಿಯುತ ಹಾಲೋಜನ್ ಹೆಡ್ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿರುತ್ತದೆ.
-
ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೆರಿಯರ್ ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ.
-
ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ.
-
ಬಸ್ ಉದ್ದದಲ್ಲಿ 3.5 ಏರಿಕೆಯಿಂದ ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವನ್ನು ಒದಗಿಸುತ್ತದೆ. ಬಸ್ ಎತ್ತರದಲ್ಲಿ 5.6 ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.
-
ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5 ಅಗಲವಾಗಿದೆ.
-
ಹಳೆಯ ಬಸ್ಗಳಿಗಿಂತ 20 ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಆಗಿದೆ.
-
ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು, ಯುಎಸ್ಬಿ ಮತ್ತು ಸಿ-ಟೈಪ್, ಹೊಂದಿಸಲಾಗಿದೆ.
-
ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಹವಾನಿಯಂತ್ರಣ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲವನ್ನು ಒದಗಿಸುತ್ತದೆ.
-
ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.
-
ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಗಳನ್ನು ಹೊಂದಿವೆ.
-
ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಝಲ್ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ.
-
ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.
