....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕ

ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹರೀಶ್ ಕಿಣಿ ಅವರು ಈ ಹಿಂದೆ ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಹಾಗೂ ಉಡುಪಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 

No Comments

Leave A Comment