ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್- ಕಂಚಿನ ಪದಕ ಗೆದ್ದ ಉಡುಪಿಯ ಮಾನ್ಸಿ ಸುವರ್ಣ
ಉಡುಪಿ:ಆ. 13. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ.
ಮೀನುಗಾರರಾಗಿ ಕೆಲಸ ಮಾಡುತ್ತಿರುವ ಉಡುಪಿಯ ಮಲ್ಪೆಯ ನಿವಾಸಿ ಮಾಲತಿ ಮತ್ತು ಜಗದೀಶ್ ಸುವರ್ಣ ಅವರ ಪುತ್ರಿ ಮಾನ್ಸಿ.
ಮಾನ್ಸಿ ಅವರ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಭಿನಂದನೆ ಸಲ್ಲಿಸಿದ್ದಾರೆ. ಅವರು ರಾಜ್ಯದ ಇತರ ಬಾಕ್ಸರ್‌ಗಳಿಗೆ ಸ್ಫೂರ್ತಿ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್ ಅಪರೂಪ. ಈ ಕ್ರೀಡೆ ಮತ್ತಷ್ಟು ಬೆಳೆಯಲಿ. ಕರಾವಳಿಯ ಮಕ್ಕಳು ಬಾಕ್ಸಿಂಗ್‌ನಲ್ಲಿ ಮಿಂಚಲಿ. ಮುಂದಿನ ದಿನಗಳಲ್ಲಿ ಮಾನ್ಸಿ ಸುವರ್ಣ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಹೆಚ್ಚಿನ ಪದಕಗಳನ್ನು ಗೆದ್ದು ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರಲಿ. ಅವರ ಸಾಧನೆಗಳಿಗೆ ನಮ್ಮ ಸರ್ಕಾರ ಯಾವಾಗಲೂ ಬೆನ್ನೆಲುಬಾಗಿರುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.