ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು, ನಟನ ವಿರುದ್ಧ ದೂರು ನೀಡಿದ ಪತ್ನಿ
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟು ಬಹಿರಂಗವಾಗಬೇಕಿದೆ.
ಅಜಯ್ ರಾವ್ ಹಾಗೂ ಸಪ್ನಾ ಅವರುಗಳು ಪ್ರೀತಿಸಿ ಮದುವೆ ಆಗಿದ್ದರು. 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಎದುರು ಸರಳವಾಗಿ ಈ ಜೋಡಿಯ ವಿವಾಹ ನಡೆದಿತ್ತು. ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. 2019 ರಲ್ಲಿ ಮಗಳ ಜನನ ಆಗಿತ್ತು. ಇದೀಗ ಅಜಯ್ ರಾವ್ ಪತ್ನಿ ಸಪ್ನಾ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅಜಯ್ ರಾವ್ ವಿರುದ್ಧ ದೂರು ದಾಖಲಿಸಿದ್ದಾರೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
2003 ರಲ್ಲಿ ಬಿಡುಗಡೆ ಆದ ‘ಎಕ್ಸ್ಕ್ಯೂಸ್ ಮೀ’ ಸಿನಿಮಾ ಮೂಲಕ ಅಜಯ್ ರಾವ್ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಅದಕ್ಕೆ ಮುನ್ನ ಸುದೀಪ್ ನಟನೆಯ ‘ಕಿಚ್ಚ’ ಸಿನಿಮಾನಲ್ಲಿ ಸುದೀಪ್ ಗೆಳೆಯನ ಪಾತ್ರದಲ್ಲಿ ನಟಿಸಿದ್ದರು. ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಇನ್ನೂ ಹಲವು ಹಿಟ್ ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಇದೇ ವರ್ಷ ಬಿಡುಗಡೆ ಆದ ‘ಯುದ್ಧಕಾಂಡ 2 ಸಿನಿಮಾನಲ್ಲಿ ನಟಿಸುವ ಜೊತೆಗೆ ನಿರ್ಮಾಣವನ್ನೂ ಸಹ ಅಜಯ್ ರಾವ್ ಮಾಡಿದ್ದರು.