ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.
ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಅದ್ದೂರಿ ಸ್ವಾಗತ, ಪ್ರಧಾನಿ ಮೋದಿ ಭೇಟಿ ಸಾಧ್ಯತೆ
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ.
ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ, ತಮ್ಮ ತವರು ಲಖನೌಗೆ ಪ್ರಯಾಣಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಆಕ್ಸಿಯಂ-4 ಮಿಷನ್‍ಗಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.
ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಹಿಂದಿರುಗುತ್ತಾರೆ ಎಂದು ಹೇಳಲಾಗಿದೆ.
ಐಎಸ್‍ಎಸ್‍ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರಳಿದ್ದರು. ಈ ಅವಧಿಯಲ್ಲಿ ಅವರು ಭಾರತಕ್ಕೆ ಸಂಬಂಧಿಸಿದ 7 ನಿರ್ದಿಷ್ಟ ಪ್ರಯೋಗಗಳನ್ನು ನಡೆಸಿದ್ದಾರೆ. ಅವುಗಳನ್ನು ಈಗ ಭಾರತೀಯ ವಿಜ್ಞಾನಿಗಳು ಪರಿಶೀಲನೆಗಾಗಿ ಮರಳಿ ತರಲಾಗಿದ್ದು, ಫಲಿತಾಂಶಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದೆ.
ಶುಭಾಂಶು ಶುಕ್ಲಾ ಅವರು ಭಾರತಕ್ಕೆ ಮರಳಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, “ಭಾರತದ ಬಾಹ್ಯಾಕಾಶ ವೈಭವ ದೇಶದ ಮಣ್ಣನ್ನು ಸ್ಪರ್ಶಿಸಿದೆ. ಭಾರತ ಮಾತೆಯ ಪುತ್ರ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗ್ಗಿನ ಜಾವ ದೆಹಲಿಗೆ ಬಂದಿಳಿದರು. ಅವರೊಂದಿಗೆ ಮತ್ತೊಬ್ಬ ಸಮಾನ ಸಾಧನೆ ಮಾಡಿದ, ಭಾರತದ ಮೊದಲ ಮಾನವ ಗಗನಯಾನಕ್ಕೆ ಆಯ್ಕೆಯಾದ ಗಗನಯಾತ್ರಿಗಳಲ್ಲಿ ಒಬ್ಬರಾದ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ. ಬಾಲಕೃಷ್ಣ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಮಿಷನ್ಗೆ ಭಾರತದ ನಿಯೋಜಿತ ಬ್ಯಾಕಪ್ ಆಗಿದ್ದರು” ಎಂದು ಹೇಳಿದ್ದಾರೆ.
ಶನಿವಾರ, ಭಾರತಕ್ಕೆ ಹಿಂತಿರುಗಲು ವಿಮಾನದಲ್ಲಿ ಕುಳಿತಿದ್ದ ಶುಭಾಂಶು ಶುಕ್ಲಾ ಅವರು ನಗುಮೊಗದಲ್ಲಿರುವ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು.
ಭಾರತಕ್ಕೆ ಹಿಂತಿರುಗಲು ವಿಮಾನದಲ್ಲಿ ಕುಳಿತಿದ್ದು, ಈ ಸಮಯದಲ್ಲಿ ನನ್ನ ಹೃದಯದಲ್ಲಿ ಹಲವು ಭಾವನೆಗಳು ಕುಣಿದಾಡುತ್ತಿವೆ. ಈ ಮಿಷನ್‍ಗಾಗಿ ಕಳೆದ ವರ್ಷ ನನ್ನ ಸ್ನೇಹಿತರು ಮತ್ತು ಕುಟುಂಬವಾಗಿದ್ದ ಅದ್ಭುತ ಜನರ ಗುಂಪನ್ನು ಬಿಟ್ಟು ಹೋಗಿದ್ದಕ್ಕೆ ನನಗೆ ದುಃಖವಾಗುತ್ತದೆ. ಇದೇ ವೇಳೆ, ಮಿಷನ್ ನಂತರ ಮೊದಲ ಬಾರಿಗೆ ನನ್ನ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ದೇಶದ ಪ್ರತಿಯೊಬ್ಬರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಇದು ಜೀವನಕ್ಕೂ ಅನ್ವಯಿಸುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದರು.