ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ:ಸಹಕಾರ ಕ್ಷೇತ್ರದಲ್ಲಿ ಶಿಸ್ತು ತರಲು ಕೇಂದ್ರದ ಹೆಜ್ಜೆ: ಶಾಸಕ ಯಶ್ಪಾಲ್
ಉಡುಪಿ:ಸಹಕಾರ ಕ್ಷೇತ್ರದಲ್ಲಿ ಆರ್ಥಿಕ ಶಿಸ್ತು ತಂದು, ಜನರ ವಿಶ್ವಾಸದ ಜತೆಗೆ ವ್ಯವಹಾರ ಹೆಚ್ಚಳಕ್ಕೆ ಕೇಂದ್ರ ಸರಕಾರ ಕಾನೂನು ತರಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಹೇಳಿದ್ದಾರೆ.
ಅವರು ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಲಿಕೋ ಬ್ಯಾಂಕಿನ ಡೈಮಂಡ್ ಜುಬಿಲಿ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜನರ ಮನೆ ಬಾಗಿಲಿಗೆ ಸಹಕಾರ ಸೇವೆಗೆ ಕೇಂದ್ರ ಸರಕಾರ ಉದ್ದೇಶಿಸಿದ್ದು ಗುಜರಾತಿನ ತ್ರಿಭುವನ್ ಸಹಕಾರ ವಿವಿಯಲ್ಲಿ ಸಹಕಾರ, ಮಾರುಕಟ್ಟೆ ನಿಟ್ಟಿನಲ್ಲಿ ಎಂಬಿಎ ಶಿಕ್ಷಣ ಸಹಕಾರ ಕ್ಷೇತ್ರದ ಮತ್ತಷ್ಟು ಪ್ರಗತಿಗೆ ಪೂರಕವಾಗಲಿದೆ.
ದೇಶದ ಆರ್ಥಿಕ ಭರವಸೆಯ ಭವಿಷ್ಯವಾದ ಸಹಕಾರ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸ ಕೇಂದ್ರದಿಂದ ಆಗುತ್ತಿದೆ. ಆದರೆ ರಾಜ್ಯ ಸರಕಾರ ಸಹಕಾರ ಆಡಳಿತ ಮಂಡಳಿಗೆ ಮೀಸಲು ತರಲು ಮುಂದಾಗಿದೆ. ಸಹಕಾರ ಕ್ಷೇತ್ರ ಉಳಿಸಿ ಬೆಳೆಸಲು ರಾಜಕೀಯದ ಹೊರತಾಗಿ ಚಿಂತನೆ ಮುಖ್ಯ. ಸಹಕಾರ ಕ್ಷೇತ್ರಕ್ಕೆ ನ್ಯಾಯ ಒದಗಿಸಿ, ಭವಿಷ್ಯ ರೂಪಿಸುವ ಕೆಲಸವಾಗಬೇಕು. ಠೇವಣಿ, ಸಾಲ ವ್ಯವಹಾರದಲ್ಲಿ ಗುಣಮಟ್ಟದ ಸೇವೆ, ವಿಶ್ವಾಸ ಮುಖ್ಯ ಎಂದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿ, ರಾಜ್ಯ ಸರಕಾರದ ಉದ್ದೇಶಿತ ತಿದ್ದುಪಡಿ, ಠೇವಣಿ ವಿನಿಯೋಗ ಕುರಿತ ವಿಧೇಯಕ ಜಾರಿಗೆ ಬಂದರೆ ಸಹಕಾರ ಕ್ಷೇತ್ರದ ಮೇಲಾಗುವ ಪರಿಣಾಮಗಳ ಬಗ್ಗೆ ಚಿಂತನ ಮಂಥನವಾಗಬೇಕು ಎಂದು ಹೇಳಿದರು.
ಟೌನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಜಯಪ್ರಕಾಶ್ ಕೆದ್ಲಾಯ, ಲಿಕೋ ಬ್ಯಾಂಕ್ ಅಧ್ಯಕ್ಷ ಕೃಷ್ಣ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಕಾಪು . ಎಚ್ ಗಂಗಾಧರ ಶೆಟ್ಟಿ, ಶ್ರೀಧರ ಪೀ.ಎಸ್., ಕೆ.ಸುರೇಶ್ ರಾವ್, ಶಿವಮೊಗ್ಗದ ಸನ್ನದು ಲೆಕ್ಕಪರಿಶೋಧಕ ವರುಣ್ ಭಟ್ ಉಪಸ್ಥಿತರಿದ್ದರು.
ಸಹಕಾರಿ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಹಾಗೂ ಸಿದ್ಧನಗೌಡ ಪಾಟೀಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.