ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಹತ್ಯೆ
ಕಾರ್ಕಳ:ಆ. 26ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ.