ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕೇರಳ-ಕರ್ನಾಟಕದ ಗಡಿಯಲ್ಲಿ ಘೋರ ದುರಂತ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಆರು ಜನ ಸಾವು
ಮಂಗಳೂರು:ಆಗಸ್ಟ್ .28, ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ತುಂಗುದಾಣಕ್ಕೆ ನುಗ್ಗಿ ಬಸ್ಗಾಗಿ ಕಾಯುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿ ಒಂದೇ ಕುಟುಂಬದ ಐವರು ಮತ್ತು ಆಟೋ ಚಾಲಕ ಸಾವನ್ನಪ್ಪಿದ್ದಾರೆ.
ಕೇರಳದ ಕಾಸರಗೋಡು ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಆಟೋ ರಿಕ್ಷಾದ ಹಿಂಬದಿಗೆ ಡಿಕ್ಕಿ ಹೊಡೆದು ದುರುಂತ ಸಂಭವಿಸಿದೆ. ಮೃತರ ಪೈಕಿ 3 ಮಹಿಳೆಯರು ಮತ್ತು ಓರ್ವ ಪುರುಷ ಒಂದೇ ಕುಟುಂಬದವರು.
ಸದ್ಯ ಮೃತ ಯಾರ ಗುರುತು ಪತ್ತೆ ಆಗಿಲ್ಲ. ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.