ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಲ್ಯಾಂಡಿಂಗ್ ಟೆಸ್ಟ್ ವೇಳೆ ಪಾಕ್‌ನ ಸರ್ಕಾರಿ ಹೆಲಿಕಾಪ್ಟರ್ ಪತನ; ಐವರು ಮೃತ್ಯು
ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಸಂಭವಿಸಿದೆ.
ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್ ಪರೀಕ್ಷೆ ನಡೆಸುತ್ತಿದ್ದಾಗ Mi-17 ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಐದು ಜನರೂ ಕೂಡ ಸಾವನ್ನಪ್ಪಿದ್ದಾರೆ” ಎಂದರು.