ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
14 ಅಪರಾಧ ಕೃತ್ಯಗಳಲ್ಲಿ ಭಾಗಿ: ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ
ಬೆಂಗಳೂರು: 14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ. ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿ ಅವರನ್ನು ಬಿಎನ್‌ಎಸ್‌ಎಸ್‌ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು.
ಇನ್ನು ಮುಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ, ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸುವುದಿಲ್ಲ ಅಥವಾ ಸಮಾಜಕ್ಕೆ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಖಾತರಿಪಡಿಸುವ ಬಾಂಡ್ ಸಲ್ಲಿಸುವಂತೆ ದಂಡಾಧಿಕಾರಿಗಳು ಸೂಚನೆ ನೀಡಿದರು.
ಆದರೆ, ಮುಚ್ಚಳಿಕೆ ಬರೆದುಕೊಡಲು ಪುನೀತ್ ಕೆರೆಹಳ್ಳಿಯವರು ನಿರಾಕರಿಸಿದ್ದರಿಂದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ