.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ
ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....
ಬ್ರಹ್ಮಾವರ: ಮದುವೆಗೆ ಒಪ್ಪದ ಯುವತಿಗೆ ಚೂರಿ ಇರಿದ ಯುವಕ
ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.
ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ.
ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.