ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಐಜ್ವಾಲ್:ಸೆ. 13: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ.

2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿ ರೈಲು ಮಾರ್ಗ ನಿರ್ಮಾಣ ಮಾಡುವುದು ಅತ್ಯಂತ ಸವಾಲಾಗಿತ್ತು. ಇದೀಗ ನಿಧಾನಗತಿಯಲ್ಲಿ ಸಾಗಿದ್ದ ರೈಲ್ವೆ ಕಾಮಗಾರಿ ಸತತ 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. 8,070 ಕೋಟಿ ರೂ. ವೆಚ್ಚದ ಬೈರಾಬಿ-ಸೈರಾಂಗ್ ರೈಲು ಮಾರ್ಗವು ನಿರ್ಮಾಣವಾಗಿದೆ.

ಇದೀಗ ಎಲ್ಲಾ ಸುರಂಗಗಳಲ್ಲಿ ಬ್ಯಾಲೆಸ್ಟ್ಲೆಸ್ ಟ್ರ‍್ಯಾಕ್ ಅಳವಡಿಸಲಾಗಿದೆ. ಸೇತುವೆ ಮತ್ತು ಸುರಂಗಗಳನ್ನು ಹೊರತುಪಡಿಸಿ 23.715 ಕಿ.ಮೀ ಮಾರ್ಗವು ಬಯಲು ಪ್ರದೇಶದಲ್ಲಿದೆ. ಕೆಲವೆಡೆ ಮಳೆಯಿಂದಾಗಿ ಭೂಕುಸಿತ ಉಂಟಾದರೆ, ಅದರಿಂದ ರಕ್ಷಣೆ ಪಡೆಯಲು ಸೂಕ್ತ ವ್ಯವಸ್ಥೆಗಳನ್ನು ಕೂಡ ಮಾಡಲಾಗಿದೆ.

ಇನ್ನು ಇಂದಿನಿಂದ ಸೆ.15ರ ವರೆಗೆ ಪ್ರಧಾನಿ ಮೋದಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಈ 5 ರಾಜ್ಯಗಳ ಪ್ರವಾಸ ಕೈಗೊಂಡಿದ್ದಾರೆ. ಈ ರಾಜ್ಯಗಳಿಗೆ ಭೇಟಿ ನೀಡಲಿರುವ ಅವರು ಒಟ್ಟು 71,850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

No Comments

Leave A Comment