ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬೆಂಗಳೂರು: ಟ್ರಕ್-ಕಾರು ಹಾಗೂ ಆಟೋ ಮಧ್ಯೆ ಡಿಕ್ಕಿ; ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ ಗಂಭೀರವಾಗಿದೆ.
ಮೃತರನ್ನು ಯೇಸು.ಡಿ ಮತ್ತು ಜೆನ್ನಿಫರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ. ಅಡ್ಡದಾರಿಯಿಂದ ಬಂದ ಟ್ರಕ್ ಸುಮ್ಮನಹಳ್ಳಿ ರಸ್ತೆಗೆ ಇಳಿದಾಗ ಬ್ರೇಕ್ ಫೇಲ್ ಆಗಿ ಮುಂದೆ ಇದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿದೆ.
ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಟೋ ಎರಡು ತುಂಡಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.