.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರಿನಲ್ಲಿ ಅಗ್ನಿ ಅವಘಡ: 75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ, ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ!

ಬೆಂಗಳೂರು: ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ ದಿಢೀರನೇ ವ್ಯಾಪಿಸಿ ಇಡೀ ಬಿಎಂಟಿಸಿ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್​ಎಎಲ್​​ ಏರ್​​ಪೋರ್ಟ್​ ಮುಖ್ಯ ಗೇಟ್​​ ಬಳಿ ಸೊಮವಾರ ಮುಂಜಾನೆ ಸಂಭವಿಸಿದೆ.

ಮೆಜೆಸ್ಟಿಕ್​ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್​ನ ಎಂಜಿನ್​ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಕೂಡಲೇ ಬೆಂಕಿ ಇಡೀ ಬಸ್ ವ್ಯಾಪಿಸಿದ್ದು, ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಎಎಲ್​​​ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದೆ.

No Comments

Leave A Comment