ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು, ಆದರೆ ನಾನು ಸರಿಯಾಗಿ ಓದಲಿಲ್ಲ: ಡಿ.ಕೆ. ಶಿವಕುಮಾರ್

ಸರ್.ಎಂ ವಿಶ್ವೇಶ್ವರಯ್ಯ ದಿನಾಚರಣೆಯಲ್ಲಿ ಡಿಕೆ ಶಿವಕುಮಾರ್

ಬೆಂಗಳೂರು: ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಇಂದು ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರರ (ಇಂಜಿನಿಯರ್ಸ್) ದಿನ ಆಚರಿಸಲಾಗುತ್ತಿದೆ. ಸಚಿವನಾಗಿ ಜಿಬಿಎ ಹಾಗೂ ನೀರಾವರಿ ಇಲಾಖೆಯಲ್ಲಿರುವ ಇಂಜಿನಿಯರ್ ಗಳ ಜೊತೆ ಕೆಲಸ ಮಾಡುತ್ತಿದ್ದೇನೆ. ಈ ಹಿಂದೆ ನಗರಾಭಿವೃದ್ಧಿ ಹಾಗೂ ಇಂಧನ ಸಚಿವನಾಗಿದ್ದಾಗಲೂ ಕೆಲಸ ಮಾಡಿದ್ದೆ. ಇಂಜಿನಿಯರ್ ಗಳು ದೇಶ ನಿರ್ಮಿಸುವವರು” ಎಂದು ಹೇಳಿದರು.

“ನಮ್ಮ ತಂದೆ ನನ್ನನ್ನು ಇಂಜಿನಿಯರ್ ಮಾಡಬೇಕು ಎಂದು ಬಯಸಿದ್ದರು. ಆದರೆ ನಾನು ಸರಿಯಾಗಿ ಓದಲಿಲ್ಲ. ನಮ್ಮ ತಂದೆ ಆಸೆ ಈಡೇರಿಸಬೇಕು ಎಂದು ಇಂಜಿನಿಯರಿಂಗ್ ಕಾಲೇಜು ಆರಂಭಿಸಿದೆ. ನಮ್ಮ ಮನೆಯಲ್ಲಿ ಇಬ್ಬರು ಮಕ್ಕಳು ಇಂಜಿನಿಯರ್. ಒಬ್ಬರು ಸಿವಿಲ್ ಇಂಜಿನಿಯರ್ ಮತ್ತೊಬ್ಬರು ಎಲೆಕ್ಟ್ರಿಕಲ್ ಇಂಜಿನಿಯರ್” ಎಂದು ತಿಳಿಸಿದರು.

No Comments

Leave A Comment