ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಾಜಿ ಸಿಎಂ ಡಿ.ವಿ ಸದಾನಂದಗೌಡ ಬ್ಯಾಂಕ್‌ ಖಾತೆ ಹ್ಯಾಕ್‌: 3 ಲಕ್ಷ ರೂ ದೋಚಿದ ಸೈಬರ್‌ ಕಳ್ಳರು

ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್‌ ಮಾಧ್ಯಮಗಳ ಜೊತೆ ಮಾತನಾಡಿ, ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು.

ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.

No Comments

Leave A Comment