.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕರಾವಳಿ ಜಾನಪದ ಕ್ರೀಡೆ ‘ಕಂಬಳ’: ರಾಜ್ಯ ಕ್ರೀಡೆ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.

ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ.

ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.

ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ. ಈ ಬಗ್ಗೆ ಬೈಲಾ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

No Comments

Leave A Comment