ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೆಂಗಳೂರು: ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ, ಕೋಟ್ಯಂತರ ರೂ ಮೌಲ್ಯದ ವಸ್ತುಗಳು ಭಸ್ಮ
ಬೆಂಗಳೂರು: ನಗರದ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿರುವ ಪೀಠೋಪಕರಣಗಳ ಮಳಿಗೆಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ ಅಕ್ಕಪಕ್ಕದ ಅಪಾರ್ಟ್‍ಮೆಂಟ್‍ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.
ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.