ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಧರ್ಮಸ್ಥಳ ಕೇಸ್: ಸರ್ಕಾರಕ್ಕೆ ವಿರೇಂದ್ರ ಹೆಗ್ಗಡೆ ಕೃತಜ್ಞತೆ
ಮಂಗಳೂರು, ಸೆಪ್ಟೆಂಬರ್ 26: ಧರ್ಮಸ್ಥಳ ಬುರುಡೆ ಕೇಸ್ ವಿಚಾರದಲ್ಲಿ ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ನನ್ನ ಮೇಲೆ ಯಾಕೆ ಇಷ್ಟು ದ್ವೇಷ ಇದೆ ಎಂದು ಗೊತ್ತಾಗಿಲ್ಲ. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ಹೀಗಿದ್ದರೂ ಇಷ್ಟು ಶತ್ರುತ್ವ ಯಾಕೆ ಎಂಬುದು ಅರ್ಥವಾಗ್ತಿಲ್ಲ. ನಾವು ತಪ್ಪು ಮಾಡದ ಕಾರಣ ಆತ್ಮವಿಶ್ವಾಸವಿದ್ದು, ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯೇ ಎಲ್ಲವನ್ನ ನೋಡಿಕೊಳ್ತಾರೆ ಎಂದು ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ.