ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಎಕೆಎಂಎಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣ; ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು- ಅ. 4ವರೆಗೆ ಪೊಲೀಸ್ ಕಸ್ಟಡಿ- ದುಬೈ ಉದ್ಯಮಿ,ಮಹಿಳೆಯ ಕೈವಾಡ ಇರುವ ಶಂಕೆ
ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಯಿತು.
ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂಬವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಆರೋಪಿಗಳನ್ನು ಅ. 4ವರೆಗೆ ಪೊಲೀಸ್ ಕಸ್ಟಡಿ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಸೈಫುದ್ದೀನ್ ಹತ್ಯೆಯ ಹಿಂದೆ ದುಬೈಯ ಉದ್ಯಮಿ ಮತ್ತು ಮಹಿಳೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ತೀವ್ರಗೊಂಡಿದೆ.