ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮೈಸೂರು ಅರಮನೆಯಲ್ಲಿ ಸುಂದರವಾಗಿ ನೆರವೇರಿದ ಆಯುಧ ಪೂಜೆ

ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ.

ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. ‘ಆಯುಧ ಪೂಜೆ’ಗೆ ರಾಜ ವೈಭವ; ಮೆರವಣಿಗೆಯಲ್ಲಿ ರಾಜಮನೆತನದ ಆನೆ, ಹಸು ಮತ್ತು ಕುದುರೆಗಳು ಭಾಗವಹಿಸಿವೆ.

ಅರಮನೆಯಲ್ಲಿ ಆಯುಧಪೂಜೆ

ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ರಾಜವಂಶಸ್ಥ ಯದುವೀರರಿಂದ ಪೂಜೆ, ಪೂರ್ಣಾಹುತಿ ಕಾರ್ಯ ನಡೆದಿದೆ. ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಯುಧಗಳನ್ನು ಪಲ್ಲಕ್ಕಿಯಲ್ಲಿ ರವಾನಿಸಲಾಗಿದೆ. ಶುಚಿಗೊಳಿಸಿದ ಬಳಿಕ ಆಯುಧಗಳನ್ನ ಪಲ್ಲಕಿಯಲ್ಲಿ ವಾಪಸ್ ಅರಮನೆಗೆ ರವಾನೆ ಮಾಡಲಾಗಿದೆ. ಅರಮನೆಯ ಆನೆ ಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಕಾರ್ಯ ನಡೆದಿದೆ.

ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಯದುವೀರರು ಪೂಜೆ ಸಲ್ಲಿಸಿದರು. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನೆರವೇರಿಸಿದ್ದಾರೆ.

ಯದುವೀರರಿಂದ ಪೂಜಾ ಕೈಕಾರ್ಯ

ಯದುವೀರರಿಂದ ಪೂಜಾ ಕೈಕಾರ್ಯ ನಡೆದಿದೆ. ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುಗಳಿಗೂ ಪೂಜೆ ಸಲ್ಲಿಸಿದ ಬಳಿಕ ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ನೆರವೇರಿದೆ.

ಸೋಮೇಶ್ವರ ದೇಗುಲಕ್ಕೆ ಪಟ್ಟದ ಕತ್ತಿಯ ಜೊತೆಗೆ ಪಲ್ಲಕ್ಕಿ ಹೊರಟಿತು. ಪಟ್ಟದ ಆನೆಗಳು. ಪಟ್ಟದ ಕುದುರೆಗಳ ಜೊತೆಗೆ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ.

No Comments

Leave A Comment