ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಗ್ರಾಹಕರಿಗೆ ಶಾಕ್: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 15.50 ರೂ. ಏರಿಕೆ
ನವದೆಹಲಿ:ಅ. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಗೆ ಬರಲಿದೆ. ದೇಶೀಯ ಬಳಕೆಗೆ ಬಳಸುವ 14.2 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 15.50 ರೂ. ಬೆಲೆ ಏರಿಕೆಯಾಗುವ ಮೂಲಕ, ಸಿಲಿಂಡರ್ ಬೆಲೆ 1595.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 16.5 ರೂ. ದರ ಏರಿಕೆಯಾಗಿದ್ದು, ಸಿಲಿಂಡರ್ ದರ 1,700.50 ರೂ. ಆಗಿದೆ. ಇನ್ನು ಮುಂಬೈನಲ್ಲಿ 15.50 ರೂ. ಬೆಲೆ ಹೆಚ್ಚಳವಾಗಿ, ಸಿಲಿಂಡರ್ ಬೆಲೆ 1,547 ರೂ. ತಲುಪಿದೆ. ಚೆನ್ನೈನಲ್ಲಿ 16.5 ರೂ. ದರ ಏರಿಕೆಯಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆ 1754.50 ರೂ. ಆಗಿದೆ.
ಇನ್ನು 14.2 ಕೆಜಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ದರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಗ್ಯಾಸ್ ದರ ಏರಿಕೆ ಮಾಡಿರುವುದು ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ಶಾಕ್ ನೀಡಿದಂತಾಗಿದೆ.