ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಗಾಂಧೀಜಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.
ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು.
ಇಂದು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿಗಳಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಕೂಡ ಒಬ್ಬರು. ಈ ಮಹಾನ್ ಚೇತನಗಳ ಜಯಂತಿಯ ಜೊತೆ ಇಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಕೂಡ ಕೋರುತ್ತೇನೆಂದು ತಿಳಿಸಿದರು.