ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ: ಎಕೆಎಂಎಸ್ ಬಸ್ ಮಾಲಿಕ ಸೈಫುದ್ದಿನ್ ಕೊಲೆ ಪ್ರಕರಣ: ಮಹಿಳೆ ಬಂಧನ
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಶ್ರೀಮತಿ ರಿಧಾ ಶಭನಾ(27), ಗಂಡ : ಮೊಹಮ್ಮದ್ ಫೈಜಲ್ ಖಾನ್, ಸಿ ಗೇಟ್ ಅಪಾರ್ಟ್ಮೆಂಟ್, ಮೆಷಿನ್ ಕಂಪೌಂಡ್ ಹತ್ತಿರ, ಬಡಗುಬೆಟ್ಟು, ಉಡುಪಿ ಇವರನ್ನು ಈ ದಿನ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಿಕ್ಕುಳಿದ ಆರೋಪಿಗಳಾದ ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮೊಹಮದ್ ಶರೀಫ್, ಸುರತ್ಕಲ್ ಕೃಷಾಪುರದ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ಶುಕೂರು ಯಾನೆ ಅದ್ದು ಬಂಧನದಲ್ಲಿದ್ದಾರೆ. ಇದರಲ್ಲಿ ಶರೀಫ್ ಹಾಗೂ ಅದ್ದು ಎಕೆಎಂಎಸ್ ಬಸ್‌ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರೆ, ಫೈಸಲ್ ಖಾನ್ ಸೈಫ್‌ನ ಆತ್ಮೀಯನಾಗಿದ್ದನು. ಹತ್ಯೆಯ ಹಿಂದೆ ಹಲವಾರು ಕಾರಣಗಳು ಸದ್ದು ಮಾಡುತಲಿದ್ದು, ಇದೀಗ ಸುಂದರಿಯೋರ್ವಳ ಬಂಧನದೊಂದಿಗೆ ಹತ್ಯಾ ಪ್ರಕರಣ ಮತ್ತೊಂದು ತಿರುವನ್ನು ಪಡೆದಿದೆ.