ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮಡಿಕೇರಿ: ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.
ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ ನಾಲ್ಕು-ಐದು ಗಂಟೆ ವೇಳೆಗೆ ಶಾಲಾ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರಲ್ಲಿ ಬಾಲಕ ದುರದೃಷ್ಟವಶಾತ್ ಸಜೀವ ದಹನವಾಗಿದ್ದಾನೆ.
ಅಗ್ನಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಯತ್ನಿಸಿದರೂ, ಪುಷ್ಪಕ್ ಆ ಸಮಯದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.