.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕೇರಳ: ಬಾವಿಗೆ ಹಾರಿದ ಮಹಿಳೆ ರಕ್ಷಣೆ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು!

ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ.

ಭಾನುವಾರ ಮಧ್ಯರಾತ್ರಿಯ ಸುಮಾರಿಗೆ,ನೆಡುವತ್ತೂರಿನಲ್ಲಿ 80 ಅಡಿ ಆಳದ ಬಾವಿಗೆ ಮಹಿಳೆಯೊಬ್ಬರು ಹಾರಿದ್ದಾರೆ ಎಂದು ಮಾಹಿತಿ ಬಂದಿತು. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಕಾರ್ಯಾಚರಣೆ ಆರಂಭಿಸಿತು.

ಕುಮಾರ್ ಅವರು ಸುರಕ್ಷತಾ ಸಾಧನಗಳನ್ನು ಧರಿಸಿ ಬಾವಿಗೆ ಇಳಿಯುತ್ತಿದ್ದಂತೆ, ಬಾವಿಗೆ ಹಾಕಿದ್ದ ತಡೆಗೋಡೆ ಕುಸಿದು ಅರ್ಚನಾ ಮತ್ತು ಕುಮಾರ್‌ ಅವರ ಮೇಲೆ ಬಿದ್ದಿದೆ. ಅದೇ ವೇಳೆ ಹತ್ತಿರದಲ್ಲಿ ನಿಂತಿದ್ದ ಶಿವಕೃಷ್ಣನ್ ಕೂಡ ಬಾವಿಗೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮೂವರನ್ನು ಬಾವಿಯಿಂದ ಹೊರತಂದು, ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ವೈಯಕ್ತಿಕ ಸಮಸ್ಯೆಗಳಿಂದಾಗಿ ಅರ್ಚನಾ ಬಾವಿಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

No Comments

Leave A Comment