ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ನಾಯಕತ್ವ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಪ್ರಶ್ನಿಸಿದರು.

ನಾವು ಯಾವಾಗಲೂ ಭೇಟಿಯಾಗುತ್ತಲೇ ಇರುತ್ತೇವೆ. ನಮ್ಮ ‘ಡಿನ್ನರ್ ಮೀಟಿಂಗ್’ಗೆ ವಿಶೇಷ ಅರ್ಥ ಕಲ್ಪಿಸುವುದನ್ನು ತಳ್ಳಿಹಾಕಿದರು. ಆದರೆ, ರಾಜ್ಯ ಸರ್ಕಾರವು ಎರಡೂವರೆ ವರ್ಷಗಳ ಆಡಳಿತವನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ದಟ್ಟವಾಗಿರುವ ಸಂದರ್ಭದಲ್ಲಿ ಈ ಔತಣಕೂಟವನ್ನು ಕರೆದಿದ್ದಾರೆ.

No Comments

Leave A Comment