ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು ಶಾಕಿಂಗ್: ಇಂಜೆಕ್ಷನ್ ಚುಚ್ಚಿ ಪತ್ನಿಯನ್ನೇ ಕೊಂದ ವೈದ್ಯ; ಪ್ರಕರಣ ಬಯಲಾಗಿದ್ದೇ ರೋಚಕ!

ಬೆಂಗಳೂರು: ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್​ ವೈದ್ಯ​ನನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು. ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದ್ದು, ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವೃತ್ತಿಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅನಾರೋಗ್ಯ ಸಮಸ್ಯೆ ಇರುವ ಕಾರಣ ಈತ ಕೊಲೆ ಮಾಡಿದ್ದಾನೆ ಎಂಬ ಆಘಾತಕಾರಿ ವಿಷಯ ತನಿಖೆ ವೇಳೆ ಗೊತ್ತಾಗಿದೆ.

 

ಮೂಲಗಳ ಪ್ರಕಾರ, 2024ರ ಮೇ 26ರಂದು ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ವಿವಾಹವಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿದ್ದ ಡಾ.ಕೃತಿಕಾರೆಡ್ಡಿ ಅವರಿಗೆ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಾಗಿತ್ತು. ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವಿಷಯ ಮುಚ್ಚಿಟ್ಟು ಕುಟುಂಬಸ್ಥರು ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ ಡಾ.ಮಹೇಂದ್ರರೆಡ್ಡಿಗೆ ಮದುವೆ ಮಾಡಿಕೊಟ್ಟಿದ್ದರು.

ಆದರೆ, ಮದುವೆ ಬಳಿಕ ಹೆಂಡತಿಯ ಆರೋಗ್ಯ ಸಮಸ್ಯೆ ವಿಷಯ ಪತಿ ಮಹೇಂದ್ರ ರೆಡ್ಡಿಗೆ ಗೊತ್ತಾಗಿತ್ತು. ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯನ್ನ ಮಹೇಂದ್ರರೆಡ್ಡಿ ಇಂಜೆಕ್ಷನ್ ನೀಡಿ ಕೊಂದಿದ್ದ. ಆದರೆ ಅದನ್ನು ಸಹಜ ಸಾವು ಎಂದು ಬಿಂಬಿಸಿದ್ದ.

ಸಹಜ ಸಾವು ಎಂಬಂತೆ ಬಿಂಬಿಸಿದ್ದ ಖತರ್ನಾಕ್ ವೈದ್ಯ

ವೈದ್ಯ ಮಹೇಂದ್ರ ರೆಡ್ಡಿ ತನ್ನ ವೈದ್ಯಕೀಯ ಬುದ್ದಿ ಬಳಸಿ ಕೊಲೆ ಮಾಡಿದ ಬಳಿಕ ನ್ಯಾಚುರಲ್ ಡೆತ್ ಆಗಿದೆ ಎಂದು ಎಲ್ಲರನ್ನು ನಂಬಿಸಿದ್ದ. ಇದನ್ನು ಸಹಜ ಸಾವು ಎಂದೇ ಕುಟುಂಬದವರು ನಂಬಿದ್ದರು.

ಬಯಲಾಗಿದ್ದೇ ರೋಚಕ

ಕೃತಿಕಾ ಅವರ ಸಾವು ಸಹಜವಲ್ಲ.. ಅಸಹಜ ಎಂದು ತನಿಖೆಯಿಂದ ದೃಢಪಟ್ಟಿತ್ತು. FSL ವರದಿಯಿಂದ ಇದೊಂದು ಕೊಲೆ ಎಂಬುದು ದೃಢಪಡಿದೆ. ಎಫ್ ಎಸ್ ಎಲ್ ವರದಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ.

ಕೊಲೆಯಾದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪತ್ನಿ ಕೃತಿಕಾ ರೆಡ್ಡಿ ಕೂಡ ವೈದ್ಯೆಯಾಗಿದ್ದರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮದುವೆಯಾದ 11 ತಿಂಗಳ ಬಳಿಕ ಪತಿ ಪತ್ನಿಯ ಹತ್ಯೆಗೆ ಸ್ಕೆಚ್ ಹಾಕಿದ್ದನು. ಅದರಂತೆ ಹುಷಾರಿಲ್ಲದೇ ಮನೆಯಲ್ಲಿ ಮಲಗಿದ್ದ ಕೃತಿಕಾಗೆ ಮಹೇಂದ್ರ ಒಂದು ಇಂಜೆಕ್ಷನ್ ನೀಡಿದ್ದರು. ಆ ಇಂಜೆಕ್ಷನ್ ನಿಂದ ಕೃತಿಕಾ ಮೃತಪಟ್ಟಿದ್ದರು. ಮೊದಲು ಕುಟುಂಬದವರಿಗೆ ಈ ಬಗ್ಗೆ ಗೊತ್ತಿರಲಿಲ್ಲ. ನನ್ನ ಮಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಪೋಷಕರು ನಂಬಿದ್ದರು.

ಹುಷಾರಿಲ್ಲದೆ ತವರುಮನೆಯಲ್ಲಿ ವೈದ್ಯೆ ಡಾ.ಕೃತಿಕಾರೆಡ್ಡಿ ಮಲಗಿದ್ದ ವೇಳೆ ಅಲ್ಲಿಗೆ ಬಂದಿದ್ದ ಈತ ಆಕೆಗೆ ಐವಿ ಇಂಜೆಕ್ಷನ್ ಮೂಲಕ ಎರಡು ದಿನ ಒಂದಷ್ಟು ಔಷಧ ನೀಡಿದ್ದ. ಬಳಿಕ ಜ್ಞಾನ ತಪ್ಪಿದ್ದ ಕೃತಿಕಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದಾಗಲೇ ಅವರು ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದರು. ನಂತರ ಪೊಲೀಸರು ತನಿಖೆ ನಡೆಸಿದಾಗ ಸಾವಿನ ರಹಸ್ಯ ಬಯಲಾಗಿದೆ.

No Comments

Leave A Comment