ಬೆಂಗಳೂರು ಶಾಕಿಂಗ್: ಇಂಜೆಕ್ಷನ್ ಚುಚ್ಚಿ ಪತ್ನಿಯನ್ನೇ ಕೊಂದ ವೈದ್ಯ; ಪ್ರಕರಣ ಬಯಲಾಗಿದ್ದೇ ರೋಚಕ!

ಬೆಂಗಳೂರು: ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು. ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದ್ದು, ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವೃತ್ತಿಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅನಾರೋಗ್ಯ ಸಮಸ್ಯೆ ಇರುವ ಕಾರಣ ಈತ ಕೊಲೆ ಮಾಡಿದ್ದಾನೆ ಎಂಬ ಆಘಾತಕಾರಿ ವಿಷಯ ತನಿಖೆ ವೇಳೆ ಗೊತ್ತಾಗಿದೆ.










































