ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.

ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.

ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಕುಡಿದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಆಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆಯಿದೆ. ಚಾಮರಾಜನಗರ, ಕೋಲಾರ, ಹಾಸನ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚ್ಚಕಕಬಳಾುಪುರ, ಚಿಕ್ಕಮಗಳೂರು, ಸಿ.ಬಿ.ಪುರ, ಮಂಡ್ಯ, ತುಮಕೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ಹಾವೇರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್​, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

No Comments

Leave A Comment