ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮಹೇಶ್ ವಾಳ್ವೇಕರ್ ಸೇರಿ ಮೂವರು ರಾಜ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಇನ್ನೂ ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.