ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಅಮೃತಸರ: ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ ಬೋಗಿಗಳು

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಮೂಡಿದೆ. ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಬೆಂಕಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ.

ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು.

ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಹೆಚ್ಚಿನ ಹಾನಿಯನ್ನು ತಡೆಗಟ್ಟಿದ ರೈಲ್ವೆ ಸಿಬ್ಬಂದಿ ಮತ್ತು ಸ್ಥಳೀಯ ಅಧಿಕಾರಿಗಳು ಬೆಂಕಿಯನ್ನು ತ್ವರಿತವಾಗಿ ನಂದಿಸಿದರು. ಅಪಘಾತದಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದರು.

No Comments

Leave A Comment