ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕುನುಗ್ಗಲು: 11ಕ್ಕೂ ಹೆಚ್ಚು ಜನರು ಅಸ್ವಸ್ಥ

ಬೆಂಗಳೂರು:ಅಕ್ಟೋಬರ್ 20: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಈ ವೇಳೆ ನೂಕುನುಗ್ಗಲು ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಶೋಕ್ ರೈ ನೇತೃತ್ವದಲ್ಲಿ ಇಂದು (ಅಕ್ಟೋಬರ್ 20) ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ-2025 ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯನವರು ಸಹ ಭಾಗಿಯಾಗಿದ್ದಾರೆ. ಆದ್ರೆ, ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದ್ದು, ಉಸಿರಾಡಲಾಗದೇ ಜನ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅಸ್ವಸ್ಥರನ್ನು ಪುತ್ತೂರು ತಾಲೂಕಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಅಶೋಕ್ ರೈ ಮಾಲೀಕತ್ವದ ಟ್ರಸ್ಟ್​ ನಿಂದ ಯೋಜನೆಗೊಂಡಿದ್ದು, ದೀಪಾವಳಿ ಹಬ್ಬವೆಂದು ಜನರಿಗೆ ತಟ್ಟೆ, ವಸ್ತ್ರ ಹಂಚುವ ಕಾರ್ಯಕ್ರಮವು ಸಹ ಇತ್ತು. ಇನ್ನು ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದರು.

No Comments

Leave A Comment