......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಸಕಲೇಶಪುರ: ಬಿಸಿಲೆ ಘಾಟ್ ಬಳಿ ಕಂದಕಕ್ಕೆ ಉರುಳಿದ ವ್ಯಾನ್; ಓರ್ವ ಸಾವು, 6 ಮಂದಿ ಗಂಭೀರ

ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಮೃತರನ್ನು ಶಿವರಾಜ್ (50) ಎಂದು ಗುರುತಿಸಲಾಗಿದೆ.

ವಾಹನದಲ್ಲಿ ಸುಮಾರು 30 ಪ್ರಯಾಣಿಕರಿದ್ದರು, ಅವರಲ್ಲಿ 20 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಈ ಪೈಕಿ ಶಿವರಾಜ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

No Comments

Leave A Comment