ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ. ನಿಗದಿ; ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ.

ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು.

ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಿದ್ದಾರೆ.

ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್‌ಗೆ 3,200 ರೂಪಾಯಿಗಳಿಗಿಂತ ಹೆಚ್ಚು ನೀಡಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ನಾವು ಸರ್ಕಾರದಿಂದ 50 ರೂ. ಸಬ್ಸಿಡಿ ನೀಡುತ್ತೇವೆ. ನೀವು 50 ರೂ. ಸೇರಿಸಿ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವಂತೆ ಸೂಚಿಸಿದರು. ಇದಕ್ಕೆ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಸಕ್ಕರೆ ಮಾಲೀಕರಿಂದ 50 ರೂ. ಹಾಗೂ ಸರ್ಕಾರದಿಂದ 50 ರೂ. ನೀಡಲು ನಿರ್ಧರಿಸಲಾಗಿದೆ. ಪ್ರತಿ ಟನ್‌ಗೆ 3,300 ರೂ. ನೀಡಲು ಸೂಚಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್​ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿ ರಾಷ್ಟ್ರೀಯ ಹೆದ್ದಾರಿ ಟೋಲ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

No Comments

Leave A Comment