ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ: ಲಾಡ್ಜ್‌ನಲ್ಲಿ ಅಪ್ರಾಪ್ತೆ ಜೊತೆಗಿದ್ದಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ BJP ಮುಖಂಡನ ಪುತ್ರ, ಪೋಕ್ಸೊ ಕೇಸ್ ದಾಖಲು!

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ.

ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಅಪ್ರಾಪ್ತೆಯ ನಕಲಿ ಆಧಾರ್ ಕಾರ್ಡ್ ಅನ್ನು ಲಾಡ್ಜ್ ಸಿಬ್ಬಂದಿಗೆ ನೀಡಿದ್ದನು. ಈ ವಿಷಯ ತಿಳಿದ ಬಾಲಕಿಯ ಪೋಷಕರು ಪೊಲೀಸರೊಂದಿಗೆ ಲಾಡ್ಜ್ ಗೆ ಬಂದಿದ್ದರು. ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಸಹ ದೂರು ದಾಖಲಿಸಿದ್ದಾಳೆ.

No Comments

Leave A Comment