ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ಬಗ್ಗೆ ಸಂಪೂರ್ಣ ಸಾಕ್ಷ ನೀಡಿದ ರಾಹುಲ್ ಗಾಂಧಿ-ಬಿಜೆಪಿ ಹಾಗೂ ಚುನಾವಣಾ ಆಯೋಗ ಕಂಗಾಲು; ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ:ಇಡೀ ದೇಶದಲ್ಲಿ ಚುನಾವಣೆಯಲ್ಲಿ ಅಧಿಕಾರವನ್ನು ಪಡೆಯುವುದಕ್ಕಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕೇವಲ ಅಧಿಕಾರಕ್ಕಾಗಿ ಮತದಾರ ಪಟ್ಟಿಯನ್ನೇ. ಚುನಾವಣಾ ಆಯೋಗದ ಬೆಂಬಲದೊಂದಿಗೆ ಮತಗಳತನ ನಡೆದಿರುವುದು ಬಗ್ಗೆ ಸಾಕ್ಷಿ ಸಮೇತ. ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ನಮ್ಮ ಭಾರತ ದೇಶದ ವಿರೋಧ ಪಕ್ಷದ ನಾಯಕರದ ಸನ್ಮಾನ್ಯ ರಾಹುಲ್ ಗಾಂಧಿ ಅವರು ಸವಿಸ್ತಾರವಾಗಿ ಈ ಬಿಜೆಪಿ ಹಾಗೂ ಚುನಾವಣಾ ಆಯೋಗದ ಮೈತ್ರಿಯ ಬಗ್ಗೆ ಸಾಕ್ಷಿ ಸಮೇತ ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕಂಗಲಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ .

ಇವರು ಮೋಸದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂಬುದು ಇವರಿಗೆ ಖಚಿತವಾಗಿದ್ದು ಜನರನ್ನು ಮೋಸಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ ಈ ಬಿಜೆಪಿ ಹಾಗೂ ಚುನಾವಣಾ ಆಯೋಗದ ಕಳ್ಳತನ ಇಡೀ ದೇಶದ ಜನಸಾಮಾನ್ಯರಿಗೆ ತಿಳಿದಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರವನ್ನು ನಮ್ಮ ದೇಶದ ಜನತೆಯೇ ನೀಡಲಿದ್ದಾರೆ .

ಅದೇ ರೀತಿಯಲ್ಲಿ ರಾಹುಲ್ ಗಾಂಧಿಯವರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯ ಛಲವಾದಿ ನಾರಾಯಣರಿಗೆ ಇದೆಯಾ ಎಂಬುದನ್ನು ಅವರೇ ಅರ್ಥೈಸಿ ಮಾಡಿಕೊಳ್ಳಬೇಕು .

ಅವರು ನೀಡಿದಂತಹ ಹೇಳಿಕೆಯ ಬಗ್ಗೆ ಕೇಸನ್ನು ದಾಖಲಿಸಲು ನಮ್ಮ ನಾಯಕರ ಬಳಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಕ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿರುತ್ತಾರೆ.

No Comments

Leave A Comment