ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ದೆಹಲಿ ಬೆನ್ನಲ್ಲೇ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ: ಜಿಲ್ಲಾ ನ್ಯಾಯಾಲಯದಲ್ಲಿ ಕಾರ್ ಬಾಂಬ್ ಬ್ಲಾಸ್ಟ್, ಕನಿಷ್ಠ 12 ಮಂದಿ ಸಾವು

ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ.

ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ ಹಲವಾರು ವಾಹನಗಳಿಗೆ ಹಾನಿಯಾಗಿದ್ದು, ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ.

ಇಸ್ಲಾಮಾಬಾದ್ ಜಿಲ್ಲಾ ನ್ಯಾಯಾಲಯದ ಹೊರಭಾಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಭಾರೀ ತೀವ್ರತೆಯ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ ಹಾಗೂ 20 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಸಂಸ್ಥೆ ಪಾಕಿಸ್ತಾನ್ ಟಿವಿ ವರದಿ ಮಾಡಿದೆ.

ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿಸಿದ್ದಾರೆ. ಸ್ಫೋಟ ಶಬ್ದವು ನಗರದಿಂದ ಮೈಲಿಗಳಷ್ಟು ದೂರದವರೆಗೆ ಕೇಳಿಬಂದಿದೆ. ಸ್ಫೋಟದ ತೀವ್ರತೆಗೆ ನ್ಯಾಯಾಲಯದ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳು ಸಹ ಹಾನಿಗೊಳಗಾಗಿವೆ. ನ್ಯಾಯಾಲಯಕ್ಕೆ ಹಾಜರಾಗಿದ್ದವರು ಹಾಗೂ ಪಾದಚಾರಿಗಳು ಮೃತರು ಮತ್ತು ಗಾಯಾಳುಗಳಲ್ಲಿ ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

5 ಕಿ.ಮೀ. ದೂರದವರೆಗೂ ಕೇಳಿದ ಸ್ಫೋಟದ ಸದ್ದು!

ಮಧ್ಯಾಹ್ನದ ಹೊತ್ತಿನಲ್ಲಿ ಜನರು ಹೆಚ್ಚಾಗಿರುವ ಸಮಯದಲ್ಲೇ ಈ ಬಾಂಬ್ ಸ್ಫೋಟ ಸಂಭವಿಸಿದ್ದು, ಉಗ್ರರಿಂದಲೇ ಆಗಿರುವ ಕೃತ್ಯ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಬರೊಬ್ಬರಿ 5 ಕಿ.ಮೀದೂರದವರೆಗೂ ಬಾಂಬ್ ಸ್ಫೋಟದ ಶಬ್ದಕೇಳಿದೆ.

ಅಂತೆಯೇ ಸುತ್ತಮುತ್ತಲು ಇದ್ದ ವಾಹನಗಳು ಕೂಡ ಸ್ಫೋಟದಲ್ಲಿ ಹಾನಿಗೀಡಾಗಿದ್ದು, ಗಾಯಗೊಂಡವರ ಪೈಕಿ ಹೆಚ್ಚಿನ ಜನರು ವಕೀಲರು ಮತ್ತು ಕೋರ್ಟ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಎನ್ನಲಾಗಿದೆ. ಮತ್ತೊಂದು ಕಡೆ ಪೊಲೀಸರು ಆತ್ಮಹತ್ಯಾ ದಾಳಿ ಇದಾಗಿರಬಹುದು ಎಂದು ಶಂಕಿಸಿದ್ದಾರೆ.

ದಕ್ಷಿಣ ವಜಿರಿಸ್ತಾನದ ಕೆಡೆಟ್ ಕಾಲೇಜು ವಾನಾದಲ್ಲಿ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡೆಸಿದ ದಾಳಿಯನ್ನು ಪಾಕಿಸ್ತಾನಿ ಭದ್ರತಾ ಪಡೆಗಳು ವಿಫಲಗೊಳಿಸಿದ ಕೆಲವೇ ಗಂಟೆಗಳ ನಂತರ ಈ ಸ್ಫೋಟ ಸಂಭವಿಸಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಟಿಟಿಪಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

No Comments

Leave A Comment