ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬಂಟ್ವಾಳ: ರಾಜ್ಯ ಮಟ್ಟದ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ.ಕೆ. ಚಿನ್ನದ ಪದಕ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನಡ ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಈಕೆ ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ. ಅಶೋಕ್ ಆಚಾರ್ಯ ಬಂಟ್ವಾಳ ಇವರು ಈಕೆಯ ಕರಾಟೆ ಗುರು ಆಗಿದ್ದಾರೆ.

No Comments

Leave A Comment