ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...
ಮಂಗಳೂರು: ಬಿ.ಸಿ.ರೋಡ್ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ,ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದವರ ಮೂವರು ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಹೇಗಾಯಿತು?
ಬಿಸಿರೋಡಿನ ಸರ್ಕಲ್ ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ(23ವ), ರವಿ(64ವ), ನಂಜಮ್ಮ(75ವ) ಮೃತ ದುರ್ದೈವಿಗಳು.
ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.